ಸಂಖ್ಯೆ: ಮೈನಪ್ರಾ/ಆಆಸಶಾ/2021-22 02.10.2021
ರಾಷ್ಟ್ರಪಿತ ಮಹಾತ್ಮಗಾಂಧಿ ರವರ 153ನೇ ಜಯಂತಿ ಕಾರ್ಯಕ್ರಮವನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ದಿ:02.10.2021ರಂದು ಬೆಳಗ್ಗೆ 10.00 ಗಂಟೆಗೆ ಪ್ರಾಧಿಕಾರದ ಸಭಾಂಗಣದಲ್ಲಿ ಮಹಾತ್ಮಗಾಂಧಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಯುಕ್ತರಾದ ಡಾ.ಡಿ.ಬಿ.ನಟೇಶ್, ಅಧೀಕ್ಷಕ ಅಭಿಯಂತರರು ಶ್ರೀ.ಶಂಕರ್, ಕಾರ್ಯದರ್ಶಿ ಶ್ರೀ ವೆಂಕಟರಾಜು, ವಿಶೇಷ ಭೂಸ್ವಾಧೀನಾಧಿಕಾರಿ ಶ್ರೀ.ಹರ್ಷವರ್ಧನ, ಪ್ರಾಧಿಕಾರದ ಸದಸ್ಯರಾದ ಶ್ರೀಮತಿ.ಲಕ್ಷ್ಮೀದೇವಿ, ಶ್ರೀ.ಮಾದೇಶ, ಶ್ರೀ.ನವೀನ್ಕುಮಾರ್, ಕಾರ್ಯಪಾಲಕ ಅಭಿಯಂತರರು, ಎಲ್ಲಾ ವಲಯ ಅಧಿಕಾರಿಗಳು, ಎಲ್ಲಾ ವಿಶೇಷ ತಹಶೀಲ್ದಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಸ್ಥಳದಲ್ಲಿ ಹಾಜರಿದ್ದರು.
ಆಯುಕ್ತರು
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ
ಮೈಸೂರು